Mysore
27
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬಿಸಿಲಿ ಹೊಡೆತದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನದ ವೇಳೆ ಅನಗತ್ಯ ಓಡಾಟ ನಡೆಸದಂತೆ ಮತ್ತು ಸದಾ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು ಮುಖ್ಯ ಎಂದು ಹೇಳಿದೆ.

Tags:
error: Content is protected !!