ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ.
201 ಮತಗಳ ಅಂತರದಲ್ಲಿ ಸೋತಿದ್ದ ಜೀವರಾಜ್
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 2,811 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರುಎಣಿಕೆಗೆ ಮನವಿ ಮಾಡಿದ್ದರಾದರೂ, ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರಾಗಿ ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ಆದೇಶದಂತೆ ಇದೀಗ ಅಂಚೆ ಮತಗಳ ಮರುಎಣಿಕೆಗೆ ಸಿದ್ಧತೆ ನಡೆಸಲಾಗ್ತಿದೆ.
ಶೃಂಗೇರಿ ಶಾಸಕರಾಗಿ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿತ್ತು. ಅಲ್ಲದೆ 2 ವಾರಗಳಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿತ್ತು. ಇನ್ನು ಮತ ಮರುಎಣಿಕೆ ವೇಳೆ ಏಜೆಂಟ್‌ಗಳು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಸೋತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹಾಜರಾಗುವ ನಿರೀಕ್ಷೆಯಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…