ರಾಜ್ಯ

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್‌ಗೆ ತಿಳಿಸಿದರು.

ಶಾಸಕ ಡಾ.ತಳವಾರ್ ಸಾಬಣ್ಣ ಅವರು ನಿಯಮ 330 ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರ ನೀಡಿದ ಸಚಿವರು, ಸಾರ್ವಜನಿಕ ವಿವಿಗಳಲ್ಲಿ 100 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತಹಂತವಾಗಿ ಭರ್ತಿ ಮಾಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆಯಡಿ ಶೈಕ್ಷಣಿಕ ಚಟುವಟಿಕೆಗಳನ್ನು ಹಾಗೂ ವಿವಿಗಳನ್ನು ಬಲಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದರು.

2026-27ನೇ ಸಾಲಿನಿಂದ 2030-31ನೇ ಶೈಕ್ಷಣಿಕ ಸಾಲಿನವರೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿತ ಸಮಯದೊಳಗಾಗಿ ನಡೆಸಲು ಒಟ್ಟು 5 ವರ್ಷಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ಅದರಂತೆ ವಿದ್ಯಾರ್ಥಿಗಳ ತರಗತಿ, ಪರೀಕ್ಷೆ ಮತ್ತು ಫಲಿತಾಂಶಗಳನ್ನು ಒಳಗೊಂಡಂತೆ ರಾಜ್ಯದ ಎಲ್ಲ ವಿವಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ಸಾಽಸಲಾಗಿದೆ ಎಂದು ತಿಳಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

18 hours ago