ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಧಾನಪರಿಷತ್‌ಗೆ ತಿಳಿಸಿದರು.
ಶಾಸಕ ಡಾ.ತಳವಾರ್ ಸಾಬಣ್ಣ ಅವರು ನಿಯಮ 330 ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರ ನೀಡಿದ ಸಚಿವರು, ಸಾರ್ವಜನಿಕ ವಿವಿಗಳಲ್ಲಿ 100 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತಹಂತವಾಗಿ ಭರ್ತಿ ಮಾಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಉನ್ನತ ಶಿಕ್ಷಣ ಇಲಾಖೆಯಡಿ ಶೈಕ್ಷಣಿಕ ಚಟುವಟಿಕೆಗಳನ್ನು ಹಾಗೂ ವಿವಿಗಳನ್ನು ಬಲಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಹೇಳಿದರು.
2026-27ನೇ ಸಾಲಿನಿಂದ 2030-31ನೇ ಶೈಕ್ಷಣಿಕ ಸಾಲಿನವರೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿತ ಸಮಯದೊಳಗಾಗಿ ನಡೆಸಲು ಒಟ್ಟು 5 ವರ್ಷಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ಅದರಂತೆ ವಿದ್ಯಾರ್ಥಿಗಳ ತರಗತಿ, ಪರೀಕ್ಷೆ ಮತ್ತು ಫಲಿತಾಂಶಗಳನ್ನು ಒಳಗೊಂಡಂತೆ ರಾಜ್ಯದ ಎಲ್ಲ ವಿವಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಏಕರೂಪತೆಯನ್ನು ಸಾಽಸಲಾಗಿದೆ ಎಂದು ತಿಳಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…