Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು, ಎಲ್ಲಾ ಇಲಾಖೆಗಳಿಗಿಂತಲೂ ಹೆಚ್ಚು ಹುದ್ದೆಗಳ ನೇಮಕಾತಿ ಶಿಕ್ಷಣ ಇಲಾಖೆಯಲ್ಲೇ ನಡೆಯಬೇಕಿದೆ. ಸಚಿವ ಸಂಪುಟದಲ್ಲಿ ಒಳ ಮೀಸಲಾತಿ ಕುರಿತು ನಿರ್ಧಾರ ತೆಗೆದುಕೊಂಡಿದ್ದೇವೆ. ಅದರ ಆಧಾರದ ಮೇಲೆ ಶೀಘ್ರದಲ್ಲೇ ಸಿಇಟಿ ಪರೀಕ್ಷೆ ನಡೆಸಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದರು.

ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5800 ಹುದ್ದೆಗಳಿಗೂ ನೇಮಕಾತಿ ನಡೆಸಲು ಅನುಮತಿ ನೀಡಲಾಗುವುದು. ಇದರಿಂದ ಕನ್ನಡ ಮಾಧ್ಯಮದ ಶಾಲೆಗಳನ್ನು ಬಲವರ್ಧನೆಗೊಳಿಸಿದಂತಾಗುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ನಿರಾಶೆ ಮಾಡುವುದಿಲ್ಲ. ಆದಷ್ಟು ಶೀಘ್ರವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು. ಇಲಾಖೆಗೂ ಶಿಕ್ಷಕರ ಅಗತ್ಯ ಇದೆ ಎಂದರು.

Tags:
error: Content is protected !!