ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಡಿಸೆಂಬರ್ 30ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು.
ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಬೆಂಗಳೂರಿನಲ್ಲಿ ಉದ್ಯೋಗ ಇದ್ದು, ಹುದ್ದೆಗಳ ಸಂಖ್ಯೆ 8 ಇದೆ. ವೇತನ ತಿಂಗಳಿಗೆ 45,000 ರೂ. ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ:-ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ
ಶೈಕ್ಷಣಿಕ ಅರ್ಹತೆ:
GAMCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, BAMS, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ಸರ್ಕಾರದ ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಪ್ರಾಂಶುಪಾಲರು , ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು, ಧನ್ವಂತರಿ ರಸ್ತೆ, ಬೆಂಗಳೂರು-560009ಗೆ ಕಳುಹಿಸಬೇಕು.





