Mysore
24
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ‘545 ಪಿಎಸ್‌ಐಗಳು ಈಗಾಗಲೇ ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 ಪಿಎಸ್‌ಐಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಖಾಲಿ ಇರುವ ಹುದ್ದೆಗಳ ಪೈಕಿ 8 ಸಾವಿರ ಕಾನ್‌ಸ್ಟೆಬಲ್‌ಗಳ ನೇಮಕಾತಿ ಶೀಘ್ರವೇ ನಡೆಯಲಿದೆ’ ಎಂದರು.

56,834 ಹುದ್ದೆ ಭರ್ತಿಗೆ ಕ್ರಮ
‘56,834 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಈಗಾಗಲೇ ಪ್ರಕಟಿಸಿದ್ದಾರೆ. ಅದರಲ್ಲಿ ಕಾನ್‌ಸ್ಟೆಬಲ್ ಹುದ್ದೆಗಳೂ ಸೇರಿವೆ’ ಎಂದು ಸಚಿವರು ಸ್ಪಷ್ಟಪಡಿಸಿದರು.

ಸೈಬರ್ ಅಪರಾಧ ತಡೆಗೆ ಕ್ರಮ
‘ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಇಲಾಖೆ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಅದಕ್ಕಾಗಿಯೇ ಸೈಬರ್ ಅಪರಾಧಗಳ ಮೇಲ್ವಿಚಾರಣೆಗಾಗಿ ಡಿಜಿಪಿ ಹುದ್ದೆಯನ್ನು ಸೃಷ್ಟಿಸಲಾಗಿದೆ. 24 ಸಾವಿರ ಪ್ರಕರಣಗಳ ಪೈಕಿ 10 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಪೊಲೀಸರಿಗೂ ಸೈಬರ್ ಅಪರಾಧಗಳ ಬಗ್ಗೆ ತಾಂತ್ರಿಕ ತರಬೇತಿ ನೀಡಲಾಗುತ್ತಿದೆ’ ಎಂದರು.

Tags:
error: Content is protected !!