Mysore
23
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ೩ ದಿನಗಳ ಕಾಲ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ಮಳೆ ಇರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ೩ ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಅಂತೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನವಂತೂ ಅಸ್ತವ್ಯಸ್ತವಾಗಿದೆ. ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಮಳೆ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಮೈಸೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂತೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ೩ ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ ೧೩, ೧೪, ೧೫ ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!