ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ಮಳೆ ಇರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ೩ ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಅಂತೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನವಂತೂ ಅಸ್ತವ್ಯಸ್ತವಾಗಿದೆ. ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಮಳೆ ಮುಂದುವರೆಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಮೈಸೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂತೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ೩ ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ ೧೩, ೧೪, ೧೫ ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…