ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಏರಿಕೆ ಬೆನ್ನಲ್ಲೇ ಈಗ ಝೀಕಾ ವೈರಸ್ ಆರ್ಭಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ರಾಜ್ಯದಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿದ್ದು, ಶಿವಮೊಗ್ಗದಲ್ಲಿ ವೃದ್ಧ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಡೆಂಗ್ಯೂ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಪರಿಹಾರ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಝೀಕಾ ಸೋಂಕು ಉಂಟಾದರೆ ಸಾಮಾನ್ಯವಾಗಿ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು ಉಂಟಾಗುವುದು ಆಗುತ್ತದೆ. ಜೊತೆಗೆ ಕಾಲು ಮತ್ತು ಸ್ನಾಯುಗಳಲ್ಲಿ ನೋವು ಉಂಟಾಗುತ್ತದೆ. ಇನ್ನು ಬಹುತೇಕರಲ್ಲಿ ಝೀಕಾ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಸಾಮಾನ್ಯವಾಗಿ ರೋಗದ ಲಕ್ಷಣ ಕಾಣಿಸಿಕೊಂಡರೆ ೨ ರಿಂದ ೭ ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿಯಲ್ಲಿ ಝೀಕಾ ವೈರಸ್ ಸೋಂಕು ಕಾಣಿಸಿಕೊಂಡರೆ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ ಬೆಳವಣಿಗೆ ಕಂಡು ಬರುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜೊತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…