Mysore
24
mist

Social Media

ಗುರುವಾರ, 12 ಡಿಸೆಂಬರ್ 2024
Light
Dark

ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ : ರಾಜ್ಯ ಸರ್ಕಾರ ನಿರ್ಧಾರ!

ಬೆಂಗಳೂರು : ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಹಾಗೂ ಮಹಿಳಾ ಸಂಘಟನೆಗಳು ಹಾಗೂ ಟ್ರೇಡ್ ಯೂನಿಯನ್ ಸಂಘಟನೆಗಳ ಸಮನ್ವಯ ಸಮಿತಿಯ ನಾಯಕರುಗಳು, ಪದಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ ನಡೆಸಿದರು.

ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕ ಮುಖಂಡರಿಗೆ ಭರವಸೆ ನೀಡಿದರು. ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ, ಬಿಜೆಪಿ ಅವಧಿಯಲ್ಲಿ 8 ಗಂಟೆ ಅವಧಿಯನ್ನ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು.

ಈಗ ಮತ್ತೆ 12 ಗಂಟೆಯಿಂದ 8 ಗಂಟೆಗೆ ಕೆಲಸದ ಅವಧಿ ಇಳಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ