ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ.
ರೀಲ್ಸ್ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೊರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಇದು ನಡೆದಿದೆ.
ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಕೊರಿಯರ್ ಕಚೇರಿಗೆ ದೊಡ್ಡ ಪಾರ್ಸಲ್ ಅನ್ನು ಹೊತ್ತು ತಂದಿದ್ದಾರೆ. ಇಷ್ಟು ದೊಡ್ಡ ಚೀಲ ನೋಡಿ ಒಳಗೆ ಏನಿದೆ ಎಂದು ಸಿಬ್ಬಂದಿ ಪ್ರಶ್ನಿಸಿದ್ದು, ಈ ವೇಳೆ ಕುಟುಂಬದವರಿಂದ ಯಾವುದೇ ಉತ್ತರ ಬಂದಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಪಾರ್ಸಲ್ ಓಪನ್ ಮಾಡಿ ನೋಡಿದ್ದಾರೆ. ಆ ವೇಳೆ ಅರೆಕ್ಷಣ ಅವರು ಬೆಚ್ಚಿಬಿದ್ದಿದ್ದು, ವೃದ್ಧ ವ್ಯಕ್ತಿಯೋರ್ವರು ಚೀಲದಲ್ಲಿ ಇರೋದು ಗೊತ್ತಾಗಿದೆ. ಆತ ಕೊರಿಯರ್ ಮಾಡಲು ಬಂದಿದ್ದ ಕುಟುಂಬದ ಪೈಕಿ ಮಹಿಳೆಯ ತಂದೆ ಎಂಬುದು ತಿಳಿದುಬಂದಿದೆ. ಅವರು ಚೀಲದಲ್ಲಿ ಉಸಿರಾಡಲೂ ಕಷ್ಟ ಪಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಹೀಗಿದ್ದರೂ ಕುಟುಂಬದವರು ಮಾತ್ರ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ ಬಸ್ ಟಿಕೆಟ್‌ಗಳು ಸಿಗದ ಸಮಸ್ಯೆಯನ್ನು ತೋರಿಸಲು, ಮನುಷ್ಯನನ್ನೇ ಕೊರಿಯರ್ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲು ಈ ರೀತಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇವರ ಹುಚ್ಚಾಟದ ಬಗ್ಗೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರೂ, ಇಷ್ಟು ದೂರ ಬಂದು ಇಷ್ಟು ಕಷ್ಟಪಟ್ಟಿದ್ದೇವೆ. ದಯವಿಟ್ಟು ಪಾರ್ಸೆಲ್ ತೆಗೆದುಕೊಳ್ಳಿ ಎಂದು ಮತ್ತೆ ಮೊಂಡುತನ ಪ್ರದರ್ಶಿಸಿದ್ದಾರೆ ಎನ್ನಲಾಗಿದೆ.
ಬಳಿಕ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಖಾಕಿ, ಕುಟುಂಬಸ್ಥರನ್ನು ಠಾಣೆಗೆ ಕರೆದೊಯ್ದಿದೆ. ತಮ್ಮದು ತಪ್ಪಾಯ್ತು ಎಂದು ಕುಟುಂಬಸ್ಥರು ಕ್ಷಮೆಯಾಚನೆ ಮಾಡಿದ ವಿಡಿಯೋ ದಾಖಲಿಸಿಕೊಂಡ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…