Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ನೋಂದಣಿ ಪ್ರಕ್ರಿಯೆ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಅನುಮತಿ ನೀಡಿದ್ದು, ಒಂದು ವಾರದೊಳಗೆ ನೋದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ. ಕ್ವಿಂಟಾಲ್‌ಗೆ 5,650 ರೂ.ಗಳಂತೆ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾ ನಾಫೆಡ್‌ ಮತ್ತು ಎನ್‌ಸಿಸೆಫ್‌ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವದಳ ಧಾನ್ಯ ಅಭಿವೃದ್ದಿ ಮಂಡಳಿಯನ್ನು ಖರೀದಿ ಸಂಸ್ಥೆಗಳಾಗಿ ನೇಮಕ ಮಾಡಲಾಗಿದೆ.

ಈ ಮಂಡಳಿಗೆ ಕಡಲೆಕಾಳು ಖರೀದಿ ಮಾಡುವ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದ್ದು, ರೈತರು ಸಮೀಪದ ಟಿ.ಎ.ಪಿ.ಸಿ.ಎಂ.ಎಸ್‌, ಎಫ್‌.ಪಿ.ಓ ಹಾಗೂ ಪಿ.ಎ.ಸಿ.ಎಸ್‌ ಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

ದಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

 

 

Tags:
error: Content is protected !!