ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಅನುಮತಿ ನೀಡಿದ್ದು, ಒಂದು ವಾರದೊಳಗೆ ನೋದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ. ಕ್ವಿಂಟಾಲ್‌ಗೆ 5,650 ರೂ.ಗಳಂತೆ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾ ನಾಫೆಡ್ ಮತ್ತು ಎನ್‌ಸಿಸೆಫ್ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವದಳ ಧಾನ್ಯ ಅಭಿವೃದ್ದಿ ಮಂಡಳಿಯನ್ನು ಖರೀದಿ ಸಂಸ್ಥೆಗಳಾಗಿ ನೇಮಕ ಮಾಡಲಾಗಿದೆ.
ಈ ಮಂಡಳಿಗೆ ಕಡಲೆಕಾಳು ಖರೀದಿ ಮಾಡುವ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದ್ದು, ರೈತರು ಸಮೀಪದ ಟಿ.ಎ.ಪಿ.ಸಿ.ಎಂ.ಎಸ್, ಎಫ್.ಪಿ.ಓ ಹಾಗೂ ಪಿ.ಎ.ಸಿ.ಎಸ್ ಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.
ದಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…