ರಾಜ್ಯ

ಕರ್ಮ ಸಿದ್ಧಾಂತ ಧಿಕ್ಕರಿಸಿ : ಸಿಎಂ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು : ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ

ತುಮಕೂರು : ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸಿ, ವೈಜ್ಞಾನಿಕ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಜಾ ಪ್ರಗತಿ ಪತ್ರಿಕೆ,ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಕರೆ ನೀಡಿದರು.

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಸಿಎಂ ಎಚ್ಚರಿಸಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದು ತಿಳಿಸಿದರು.

ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ. ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು. ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು ಎಂದರು.

ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ. ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

8 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

9 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

9 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

9 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

10 hours ago