ರಾಜ್ಯ

ಗಣರಾಜ್ಯೋತ್ಸವದಲ್ಲಿ ಕರ್ನಾಟಕ ಸ್ತಬ್ಧಚಿತ್ರ ನಿರಾಕರಣೆ: ರಾಜನಾಥ್ ಸಿಂಗ್‌ಗೆ ಸಿಎಂ ಪತ್ರ

ಬೆಂಗಳೂರು: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ತಬ್ಧಚಿತ್ರಕ್ಕೆ ಮನ್ನಣೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪತ್ರವೊಂದನ್ನು ಫೋಸ್ಟ್ ಮಾಡಿರುವ ಸಿಎಂ, 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸತತವಾಗಿ ಕಳೆದ 14 ವರ್ಷಗಳಿಂದ ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ಪಾಲ್ಗೊಂಡು ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 2005ರಲ್ಲಿ ಭಗವಾನ್ ಬಾಹುಬಲಿ ಮಸ್ತಾಭಿಷೇಕ, 2008ರಲ್ಲಿ ಹೊಯ್ಸಳ, 2011ರಲ್ಲಿ ಬಿದರಿ ಕಲೆ, 2012ರಲ್ಲಿ ಭೂತಾರಾಧನೆ, 2015ರಲ್ಲಿ ಚನ್ನಪಟ್ಟಣದ ಅಟಿಕೆಗಳು, 2022ರಲ್ಲಿ ಸಾಂಪ್ರದಾಯಿಕ ಕಲೆಗಳ ಸ್ತಬ್ಧಚಿತ್ರಗಳಿಗೆ ಪ್ರತಿಷ್ಠಿತ ಬಹುಮಾನ ಸಿಕ್ಕಿದೆ. ಪ್ರತಿಯೊಂದು ಸ್ತಬ್ಧಚಿತ್ರಗಳು ನಾಡಿನ ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ತೋರಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈ ಬಾರಿ (2024) ಬ್ರ್ಯಾಂಡ್ ಬೆಂಗಳೂರು ಥೀಮ್ ನಮ್ಮದಾಗಿತ್ತು. ರಕ್ಷಣಾ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆ ಬಳಿಕ ಕರ್ನಾಟಕದ ಸ್ಥಬ್ತಚಿತ್ರ ಪರಿಗಣಿಸಿಲ್ಲ. ಸ್ತಬ್ಧ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ, ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

https://x.com/siddaramaiah/status/1745413490716954750?s=20

andolanait

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago