ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.
2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ವರ್ಗಾವಣೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಡಳಿತ ಮಂಡಳಿಗಳು ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನಾಂಕವಾಗಿದೆ.
ಆಡಳಿತ ಮಂಡಳಿಗಳು ಸಲ್ಲಿಸಿದ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಉಪನಿರ್ದೇಶಕರಿಗೆ ಮೇ 9ರ ವರೆಗೆ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ. ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆ ಖಚಿತಪಡಿಸಿಕೊಂಡು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಡಿಡಿಪಿಐ ಪ್ರಸ್ತಾವನೆ ಪರಿಶೀಲಿಸಿ ದಾಖಲೆ ಸೂಕ್ತ ಶಿಫಾರಸಿನೊಂದಿಗೆ ನಿರ್ದೇಶಕರಿಗೆ ಮೇ 20 ರೊಳಗೆ ಸಲ್ಲಿಸಬೇಕು. ಅಂತರ ವಿಭಾಗ ವರ್ಗಾವಣೆ ಕೋರಿ ಬಂದ ಪ್ರಸ್ತಾವನೆಗಳನ್ನು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಏಪ್ರಿಲ್ 20ರಿಂದ ಮೇ 5 ರವರೆಗೆ ಸಲ್ಲಿಸಲು ಸಮಯ ನೀಡಲಾಗಿದೆ
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…