ಬೆಂಗಳೂರು: ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಳೆದ ಎರಡು ದಿನದಿಂದ ತಾಂತ್ರಿಕ ಕಾರಣದಿಂದ ಸ್ಥಗಿತವಾಗಿದೆ. ಟ್ಯಾಲೆಂಟ್ ಇರುವ ಯುವಕರು ಬೇರೆ ರಾಜ್ಯ ಹಾಗೂ ವಿದೇಶಕ್ಕೆ ಹೋಗಿದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಎಷ್ಟು ಮನೆಗೆ ತಲುಪಿದೆ. ಸರ್ವರ್ ಸಮಸ್ಯೆಯಾದರೆ ಯಾವಾಗ ಸಮೀಕ್ಷೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶಿಕ್ಷಕರಿಗೂ ಸಹ ತರಬೇತಿ ನೀಡಿಲ್ಲ. ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.





