ರಾಜ್ಯ

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ ರಾಜ್ಯದಲ್ಲಿರುವ ಸುಮಾರು 12 ಸಾವಿರಕ್ಕೂ ಹೆಚ್ಚು ದಲಿತ ಕ್ರಿಶ್ಚಿಯನ್ನರು ಎಸ್ಸಿ ಎಸ್‌ಟಿ ಕಾಯ್ದೆಯ ರಕ್ಷಣೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈ ತೀರ್ಪು ಬಹುದೊಡ್ಡ ಪರಿಣಾಮ ಬೀರಲಿದ್ದು, ಸುಪ್ರೀಂ ಕೋರ್ಟ್‍ನ 2015ರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಪ್ರಕಾರ ಸುಮಾರು 12 ಸಾವಿರಕ್ಕೂ ಹೆಚ್ಚು ದಲಿತ ಕ್ರಿಶ್ಚಿಯನ್ನರಿದ್ದಾರೆ. ಇವರಿಗೀಗ ಶೇ.17ರ ಎಸ್‌ಸಿ ಮೀಸಲಾತಿ, ಉದ್ಯೋಗ, ಬಡ್ತಿ ಮತ್ತು ಸರ್ಕಾರಿ ಯೋಜನೆಗಳ ಲಾಭ ಕೈತಪ್ಪುವ ಆತಂಕ ಎದುರಾಗಿದೆ. ಅವರಿಗ ಧರ್ಮ ಅಥವಾ ಸಾಂವಿಧಾನಿಕ ಹಕ್ಕುಗಳ ನಡುವೆ ಧರ್ಮಸಂಕಟಕ್ಕೆ ಸಿಲುಕಿದ್ದಾರೆ.

ಈ ತೀರ್ಪು ಬಿಜೆಪಿಯ ಮತಾಂತರ ವಿರೋಧಿ ನಿಲುವಿಗೆ ಬಲ ತುಂಬಿದ್ದರೆ, ಕಾಂಗ್ರೆಸ್‌ಗೆ ದೊಡ್ಡ ರಾಜಕೀಯ ತಲೆನೋವಾಗಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago