Mysore
21
scattered clouds

Social Media

ಗುರುವಾರ, 22 ಜನವರಿ 2026
Light
Dark

ಪಿಎಫ್‌ಐ ಸಂಘಟನೆ ಬೆಂಬಲಿಸಿ ಪೋಸ್ಟ್‌ : ಧಾರ್ಮಿಕ ಮುಖಂಡನ ಬಂಧನ

thieves arrested

ಬೆಂಗಳೂರು : ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯ(ಪಿಎಫ್‌ಐ) ಸಂಘಟನೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡರೊಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ತಾಲ್ಲೂಕಿನ ರಾಮಕುಂಜ ಗ್ರಾಮದ ಸಯ್ಯದ್ ಇಬ್ರಾಹಿಂ ತಂಗದ್ ಎಂಬವರನ್ನು ಪೊಲೀಸರು ಬಂಽಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದೇಶದಲ್ಲಿ ನಿಷೇಧಕ್ಕೆ ಒಳಪಟ್ಟಿರುವ ಪಿಎಫ್‌ಐ ಸಂಘಟನೆಯನ್ನು ತನ್ನ ವಾಟ್ಸಾಪ್ ಗ್ರೂಪ್‌ನಲ್ಲಿ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ:-ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಆರೋಪಿಯನ್ನು ಮಂಗಳವಾರ ಊರ್ವಾ ಸ್ಟೋರ್ ಬಳಿ ಬಂಽಸಿ ಆತನ ಮೊಬೈಲ್ ಪರಿಶೀಲಿಸಿದಾಗ ಪಿಎಫ್‌ಐ ಬೆಂಬಲಿಸುವ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿತ್ತು. ಭಯೋತ್ಪಾದಕ ಚಟುವಟಿಕೆಗಳಿಗೆ ಆತ ಕೆಲವು ಆಯ್ದ ವ್ಯಕ್ತಿಗಳನ್ನು ಪ್ರೇರೇಪಿಸುತ್ತಿದ್ದ.

ಪೊಲೀಸರು ಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅ.೨೪ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿದೆ.

Tags:
error: Content is protected !!