thieves arrested
ಬೆಂಗಳೂರು : ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯ(ಪಿಎಫ್‌ಐ) ಸಂಘಟನೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡರೊಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ತಾಲ್ಲೂಕಿನ ರಾಮಕುಂಜ ಗ್ರಾಮದ ಸಯ್ಯದ್ ಇಬ್ರಾಹಿಂ ತಂಗದ್ ಎಂಬವರನ್ನು ಪೊಲೀಸರು ಬಂಽಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದೇಶದಲ್ಲಿ ನಿಷೇಧಕ್ಕೆ ಒಳಪಟ್ಟಿರುವ ಪಿಎಫ್‌ಐ ಸಂಘಟನೆಯನ್ನು ತನ್ನ ವಾಟ್ಸಾಪ್ ಗ್ರೂಪ್‌ನಲ್ಲಿ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ:-ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ
ಆರೋಪಿಯನ್ನು ಮಂಗಳವಾರ ಊರ್ವಾ ಸ್ಟೋರ್ ಬಳಿ ಬಂಽಸಿ ಆತನ ಮೊಬೈಲ್ ಪರಿಶೀಲಿಸಿದಾಗ ಪಿಎಫ್‌ಐ ಬೆಂಬಲಿಸುವ ಪೋಸ್ಟ್‌ಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿತ್ತು. ಭಯೋತ್ಪಾದಕ ಚಟುವಟಿಕೆಗಳಿಗೆ ಆತ ಕೆಲವು ಆಯ್ದ ವ್ಯಕ್ತಿಗಳನ್ನು ಪ್ರೇರೇಪಿಸುತ್ತಿದ್ದ.
ಪೊಲೀಸರು ಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅ.೨೪ರವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿದೆ.
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…