ಬೆಂಗಳೂರು: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದೆ. ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಸಹ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಂಡಮಾನ್ ನಿಕೋಬಾರ್‌ಗೆ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಹೀಗಾಗಿ ಅಂಡಮಾನ್ ಸಿಕೋಬಾರ್‌ನಲ್ಲಿ ಸಿಲುಕಿದ ಕನ್ನಡಿಗರಿಗೆ ಸಂಕಷ್ಟ ಎದುರಾಗಿದ್ದು, ಬೆಳಿಗ್ಗೆ ೧೧ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಜನ ಸಂಜೆಯಾದರೂ ವಿಮಾನವಿಲ್ಲದೇ, ಆಹಾರ, ನೀರು ಸಹ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಚೆನ್ನೈಯಿಂದ ಅಂಡಮಾನ್ ನಿಕೋಬಾರ್‌ಗೆ ಹೊರಟ್ಟಿದ ವಿಮಾನ ಹವಾಮಾನ ವೈಪರೀತ್ಯ ಹಿನ್ನಲೆ ವಾಪಸ್ ಆಗಿದೆ. ವಿಮಾನಸೇವೆಗಳ ವ್ಯತ್ಯಯದಿಂದ ಅಂಡಮಾನ್ ನಿಕೊಬಾರ್ ಪೋರ್ಟ್ ಬ್ಲೇರ್‌ನಲ್ಲಿ ಕನ್ನಡಿಗರು ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ ನಡೆಸಿದ್ದಾರೆ.
ಮೈಸೂರು ಮೂಲದ ನಿವೃತ್ತ ಪ್ರಾಂಶುಪಾಲರಾದ ಪರಮೇಶ್ ಎಂಬುವವರು ಸಹ ಅಂಡಮಾನ್ ನಿಕೊಬಾರ್‌ನಲ್ಲಿ ಸಿಲುಕಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಹಸ್ತಕ್ಕೆ ಮನವಿ ಮಾಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…