ರಾಮನಗರ : ʼಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆʼ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼ ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತುʼʼ ಎಂದು ವಿವರಿಸಿದ್ದಾರೆ.
ʼʼಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡʼʼ ಎಂದು ಅವರು ತಿಳಿಸಿದ್ದಾರೆ.
ʼಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆʼ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…
ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…