Sridhar Nayak
ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ನಟ ಶ್ರೀಧರ್ ನಾಯಕ್(47) ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್ ನಾಯಕ್ ನಿಧನರಾಗಿದ್ದಾರೆ.
ಗುರುತೇ ಸಿಗದಷ್ಟು ಬದಲಾಗಿರುವ ಅವರು, ಬೆಡ್ ಮೇಲೆ ಮಲಗಿದ್ದನ್ನು ನೋಡಿ ಹಲವರಿಗೆ ಶಾಕ್ ಆಗಿತ್ತು. ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಮ್ಯಾಕ್ಸ್ ಚಿತ್ರದಲ್ಲೂ ನಟಿಸಿದ್ದರು.
ಶ್ರೀಧರ್ ನಾಯಕ್ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಹಲವು ನಟ-ನಟಿಯರು ಶ್ರೀಧರ್ ನಿಧನಕ್ಕೆ ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…