ಹಂಪಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರೇ ಈ ಪ್ರಕರಣವನ್ನು ಸಮರ್ಥವಾಗಿ ತನಿಖೆ ನಡೆಸುತ್ತಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಈಗಾಗಲೇ ಹಿರಿಯ ಪೊಲೀಸ್ ಅದಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಸಿಐಡಿಗೆ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ರೇಣುಕಾಚಾರ್ಯ ಮತ್ತು ಅವರ ಕುಟುಂಬದ ಸದಸ್ಯರು ನೀಡಿರುವ ಮಾಹಿತಿ ಹಾಗೂ ಅವರ ಸಹೋದರ ಕೊಟ್ಟಿರುವ ದೂರನ್ನು ಆಧರಿಸಿ ತನಿಖೆ ನಡೆಯಲಿದೆ. ಸತ್ಯಾಂಶ ಶೀಘ್ರದಲ್ಲೇ ಹೊರಬರಲಿದೆ. ಕೊಲೆಯ ಬಗ್ಗೆ ರೇಣುಕಾಚಾರ್ಯ ಮತ್ತು ಅವರ ಸಹೋದರರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದು ಕೊಲೆಯೋ, ಅಪಘಾತವೋ ಎಂಬುದು ತನಿಖೆಯಿಂದ ಮಾತ್ರ ಗೊತ್ತಾಗಲಿದೆ. ಇಂತಹ ಸಂದರ್ಭದಲ್ಲಿ ಊಹಾಪೋಹಗಳಿಗೆ ಉತ್ತರ ಕೊಡುವುದು ಸಮಂಜಸವಲ್ಲ ಎಂದು ಅವರು ತಿಳಿಸಿದರು.
ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ರಮೇಶ್ ಅವರ ಪುತ್ರ ಚಂದ್ರಶೇಖರ್ ಅವರ ಮೃತದೇಹ ಗುರುವಾರ ಹೊನ್ನಾಳಿ ತಾಲ್ಲೂಕಿನ ಎಚ್.ಕಡದಕಟ್ಟೆ ಬಳಿಯ ತುಂಗಾ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿತ್ತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮಹಿಳೆ ನಾಪತ್ತೆ, ಸುಳಿವಿಗಾಗಿ ಮನವಿ
Next Article ಫೆ.10ರಂದು ಬಜೆಟ್ ಮಂಡನೆ ಸಾಧ್ಯತೆ