Mysore
25
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರೇಣುಕಾಸ್ವಾಮಿ ಪ್ರಕರಣ : ಡಿ.17ರಿಂದ ನ್ಯಾಯಲಯದಲ್ಲಿ ಸಾಕ್ಷ್ಯ ವಿಚಾರಣೆ

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.

ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಸಾಕ್ಷಿಗಳ ವಿಚಾರಣೆ ನಡೆಸಬೇಕಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭಿಸಲು ಈಗ ದಿನಾಂಕ ನಿಗದಿ ಆಗಿದೆ. ಡಿಸೆಂಬರ್ 17ರಿಂದ ಸಾಕ್ಷ್ಯ ವಿಚಾರಣೆ ಶುರು ಮಾಡಲು ನ್ಯಾಯಾಲಯ ನಿರ್ಧರಿಸಿದೆ. ಪವಿತ್ರಾ ಗೌಡ ಪರ ವಕೀಲ ಬಾಲನ್​ ಅವರಿಗೆ ಕೋರ್ಟ್​ನಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಸೇರಿ 7 ಆರೋಪಿಗಳು ಹಾಜರಾಗಿದ್ದಾರೆ. ಸಹಾಯಕ ಎಸ್​ಪಿಪಿ ಸಚಿನ್ ಅವರು ಸಾಕ್ಷಿಗಳ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು, ಎಫ್ಎಸ್ಎಲ್ ಸಾಕ್ಷಿಗಳು, ತಾಂತ್ರಿಕ ಸಾಕ್ಷಿಗಳ ಪ್ರತ್ಯೇಕ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ:-ಸಂಚಾರ ಸಾಥಿ ಆಪ್ ಕಡ್ಡಾಯ : ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಹಾಯಕ ಎಸ್​ಪಿಪಿ ಸಚಿನ್ ಮನವಿ ಮಾಡಿದ್ದಾರೆ. ಅದರಂತೆ, ಸಾಕ್ಷಿ ನಂಬರ್ ಏಳು ಮತ್ತು ಎಂಟಕ್ಕೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ನೀಡಲಾಗಿದೆ. ಡಿಸೆಂಬರ್ 17ರಂದು ವಿಚಾರಣೆ ಶುರು ಆಗಲಿದೆ. ಈ ಪ್ರಕರಣದಲ್ಲಿ 260ಕ್ಕೂ ಅಧಿಕ ಸಾಕ್ಷಿಗಳು ಇವೆ. ಎಲ್ಲ ಸಾಕ್ಷಿಗಳ ವಿಚಾರಣೆ ಬಳಿಕ ಕೋರ್ಟ್ ಅಂತಿಮ ತೀರ್ಪು ನೀಡಲಿದೆ.

ಪ್ರಕರಣ ಹಿನ್ನಲೆ:
ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶ ಕಳಿಸಿದ್ದ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಲಾಯಿತು ಎಂಬ ಆರೋಪ ಇದೆ. ಆ ಘಟನೆಯಿಂದ ಆತ ಪ್ರಾಣ ಕಳೆದುಕೊಂಡ. ರೇಣುಕಾಸ್ವಾಮಿ ಶವ ಪತ್ತೆ ಆದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಜನರ ವಿರುದ್ಧ ಕೇಸ್ ದಾಖಲಾಯಿತು.

Tags:
error: Content is protected !!