ರಾಜ್ಯ

ಡಿ ಗ್ಯಾಂಗ್‌ಗೆ ಜಾಮೀನು; ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್‌ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ.

ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿರಬಹುದು ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದ್ದು ಇರುತ್ತೋ ಅವರಿಗೆ ಅಂತಿಮವಾಗಿ ಶಿಕ್ಷೆ ಆಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡುತ್ತಾ, ಕಾನೂನಿನ ಅಡಿಯಲ್ಲಿ ಈಗ ಏನು ಆಗಿದೆಯೋ ಅದಕ್ಕೆ ನಾವು ತಲೆಬಾಗುತ್ತೇವೆ. ಆದರೆ ನನ್ನ ಮಗನ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಬೇಕೆ ಹೊರತು ಬೇರೇನೂ ಬೇಡ ಎಂದರು.

ಹಾಗೆಯೇ ಸರ್ಕಾರ ಕಡೆಯಿಂದ ತಮ್ಮ ಸೊಸೆಗೆ ಖಾಯಂ ನೌಕರಿ ಕೊಡಬೇಕೆಂದು ಮನವಿ ಮಾಡಿದರು.

ದರ್ಶನ್‌ಗೆ ಜಾಮೀನು ಸಿಕ್ಕಿದೆ. ಒಂದು ವೇಳೆ ಅವರು ನಿಮ್ಮ ಜೊತೆ ಮಾತುಕತೆಗೆ ಬಂದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಾಶಿನಾಥ್‌ ಅವರು, ಅದರ ಬಗ್ಗೆ ಯೋಚನೆ ಮಾಡಿಲ್ಲ. ಅವರ ಜೊತೆ ಮಾತಾಡುವ ಅಪೇಕ್ಷೇಯೂ ಇಲ್ಲ ಎಂದು ಹೇಳಿದರು.

ಜಾಮೀನು ಸಿಕ್ಕಿರುವುದಕ್ಕೆ ಸಿಎಂ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಹಿತೈಷಿಗಳು, ಹಿರಿಯರ ಜೊತೆ ಚರ್ಚಿಸಿ ನಂತರ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.

andolana

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

1 hour ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago