ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ.
ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿರಬಹುದು ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದ್ದು ಇರುತ್ತೋ ಅವರಿಗೆ ಅಂತಿಮವಾಗಿ ಶಿಕ್ಷೆ ಆಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡುತ್ತಾ, ಕಾನೂನಿನ ಅಡಿಯಲ್ಲಿ ಈಗ ಏನು ಆಗಿದೆಯೋ ಅದಕ್ಕೆ ನಾವು ತಲೆಬಾಗುತ್ತೇವೆ. ಆದರೆ ನನ್ನ ಮಗನ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಬೇಕೆ ಹೊರತು ಬೇರೇನೂ ಬೇಡ ಎಂದರು.
ಹಾಗೆಯೇ ಸರ್ಕಾರ ಕಡೆಯಿಂದ ತಮ್ಮ ಸೊಸೆಗೆ ಖಾಯಂ ನೌಕರಿ ಕೊಡಬೇಕೆಂದು ಮನವಿ ಮಾಡಿದರು.
ದರ್ಶನ್‌ಗೆ ಜಾಮೀನು ಸಿಕ್ಕಿದೆ. ಒಂದು ವೇಳೆ ಅವರು ನಿಮ್ಮ ಜೊತೆ ಮಾತುಕತೆಗೆ ಬಂದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಾಶಿನಾಥ್ ಅವರು, ಅದರ ಬಗ್ಗೆ ಯೋಚನೆ ಮಾಡಿಲ್ಲ. ಅವರ ಜೊತೆ ಮಾತಾಡುವ ಅಪೇಕ್ಷೇಯೂ ಇಲ್ಲ ಎಂದು ಹೇಳಿದರು.
ಜಾಮೀನು ಸಿಕ್ಕಿರುವುದಕ್ಕೆ ಸಿಎಂ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಹಿತೈಷಿಗಳು, ಹಿರಿಯರ ಜೊತೆ ಚರ್ಚಿಸಿ ನಂತರ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…