ಬೆಂಗಳೂರು: ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್‌ಗೆ 45 ದಿನಗಳ ಕಾಲ ಹೈಕೋರ್ಟ್ ಮಧ್ಯಂತರ ಷರತ್ತು ಬದ್ಧ ಜಾಮೀನು ನೀಡಿದೆ. ಈ ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನಮಗೆ ಮತ್ತು ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ. ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುವವರೆಗೂ ನಾವು ಕಾನೂನು ಹೋರಾಟ ಮಾಡುತ್ತೇವೆ. ದರ್ಶನ್‌ಗೆ ಅನಾರೋಗ್ಯದ ಸಮಸ್ಯೆಯಿಂದ ಮಧ್ಯಂತರ ಜಾಮೀನು ದೊರೆತಿರುವುದರಿಮದ ನಮಗೆ ಆ ಬಗ್ಗೆ ಯಾವ ಅಭ್ಯಂತರವಿಲ್ಲ. ಆ ತೀರ್ಪನ್ನು ನ್ಯಾಯಾಲಯ ಘೋಷಿಸಿದೆ. ಹೀಗಾಗಿ ನಾವೆಲ್ಲರೂ ಕಾನೂನಿನ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಹೇಳಿದ್ದಾರೆ.





