ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿಗಳಿಗೆ ನೀಡಲು ಇರಿಸಿದ್ದ 30 ಲಕ್ಷ ಹಣ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್‌ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್‌ ಮಾಲೀಕತ್ವದ ಆರ್.ಆರ್‌ ನಗರದಲ್ಲಿರುವ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ ಹಂತಕರಿಗೆ ನೀಡಲು ಇಟ್ಟಿದ್ದ ಈ ಹಣವನ್ನು ಶುಕ್ರವಾರ(ಜೂ.14) ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಹಣವನ್ನು ರೇಣುಕಾಸ್ವಾಮಿ ಹತ್ಯೆ ಆರೋಪವನ್ನು ಹೊರುವ ಯುವಕರಿಗೆ ನೀಡಲು ಇರಿಸಿದ್ದು ಎನ್ನಲಾಗಿದೆ. ನಾವೇ ಕೊಲೆ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್‌, ಕೇಶವಮೂರ್ತಿಗೆ ಹಾಗೂ ನಿಖಿಲ್‌ ನಾಯಕ್‌ಗೆ ತಲಾ 5 ಲಕ್ಷ ನೀಡಲು ಹಣವನ್ನು ಇಡಲಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago