Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನ.28ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌.28ಕ್ಕೆ ಮುಂದೂಡಲಾಗಿದೆ.

ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ ಸಮಯ ಮುಗಿದ ಕಾರಣ ನ.28ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ಆದೇಶ ಹೊರಡಿಸಿದೆ.

ನ್ಯಾಯಾಲಯದಲ್ಲಿ ದರ್ಶನ್‌ ಪರ ವಕೀಲ ಸಿ.ವಿ.ನಾಗೇಶ್‌ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದರು. ಹೀಗಾಗಿ ಸಮಯದ ಅಭಾವ ಉಂಟಾಗಿದ್ದ ಕಾರಣ ವಿಚಾರಣೆಯನ್ನು ಮುಂದೂಡಿದೆ.

Tags:
error: Content is protected !!