Mysore
14
overcast clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಾಳೆಗೆ ಮುಂದೂಡಿದೆ.

ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್‌ ರಿಪೋರ್ಟ್‌ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ ವಾದಗಳನ್ನು ಆಲಿಸಿದ ನಂತರ ತೀರ್ಪು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್‌ಗೆ ಭಾರೀ ಬೇಸರವಾಗಿದೆ ಎನ್ನಲಾಗಿದ್ದು, ನಾಳೆಯೂ ಜಾಮೀನು ಸಿಗುತ್ತಾ ಅಥವಾ ಇಲ್ಲವೇ ಎಂದು ಎದುರು ನೋಡುತ್ತಿದ್ದಾರೆ. ಒಂದು ವೇಳೆ ನಾಳೆಯೂ ಜಾಮೀನು ಸಿಗದಿದ್ದರೆ, ನಟ ದರ್ಶನ್‌ ಮುಂದಿನ ಹೋರಾಟ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!