Mysore
25
overcast clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದರು. ನಟ ದರ್ಶನ್‌ ಅವರು ನಿನ್ನೆ ವಕೀಲರೊಡನೆ ಚರ್ಚಿಸಿ ಜಾಮೀನು ಅರ್ಜಿಗೆ ಸಹಿ ಹಾಕಿದ್ದರು. ದರ್ಶನ್‌ ಪರ ಇಂದು ವಕೀಲ ಸುನೀಲ್‌ ಅವರು, ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೇ ನ್ಯಾಯಮೂರ್ತಿ ಜೈ.ಶಂಕರ್‌ ಅವರು ಇರುವ ಪೀಠವೂ ವಿಚಾರಣೆ ನಡೆಸಲಿದ್ದು, ನಂತರ ಎಸ್‌ಎಸ್‌ಪಿ ನೋಟಿಸ್‌ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ದರ್ಶನ್‌ ಅವರು, ಬಳ್ಳಾರಿ ಜೈಲಿನಿಂದಲೇ ದೂರವಾಣಿ ಸಂಪರ್ಕದ ಮೂಲಕ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

 

Tags:
error: Content is protected !!