ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ನಟ ದರ್ಶನ್ ಅವರು ನಿನ್ನೆ ವಕೀಲರೊಡನೆ ಚರ್ಚಿಸಿ ಜಾಮೀನು ಅರ್ಜಿಗೆ ಸಹಿ ಹಾಕಿದ್ದರು. ದರ್ಶನ್ ಪರ ಇಂದು ವಕೀಲ ಸುನೀಲ್ ಅವರು, ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೇ ನ್ಯಾಯಮೂರ್ತಿ ಜೈ.ಶಂಕರ್ ಅವರು ಇರುವ ಪೀಠವೂ ವಿಚಾರಣೆ ನಡೆಸಲಿದ್ದು, ನಂತರ ಎಸ್‌ಎಸ್‌ಪಿ ನೋಟಿಸ್ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ದರ್ಶನ್ ಅವರು, ಬಳ್ಳಾರಿ ಜೈಲಿನಿಂದಲೇ ದೂರವಾಣಿ ಸಂಪರ್ಕದ ಮೂಲಕ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…