ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಟ ದರ್ಶನ್ ಜಾಮೀನು ಕುರಿತು ಹೈಕೋರ್ಟ್‌ನಲ್ಲಿ ವಕೀಲ ಸಿ.ವಿ.ನಾಗೇಶ್ ಹಾಗೂ ಸರ್ಕಾರದ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ಸುದೀರ್ಘವಾಗಿ ವಾದ-ಪ್ರತಿವಾದಗಳನ್ನು ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಮಂಡಿಸಿದ್ದರು. ಈ ವಾದ-ಪ್ರತಿವಾದಗಳನ್ನು ಆಲಿಸದ ಹೈಕೋರ್ಟ್ ತೀರ್ಪುನ್ನು ಕಾಯ್ದಿರಿಸಿತ್ತು. ಆದರೆ ಇಂದು ದರ್ಶನ್‌ಗೆ ರೆಗ್ಯುಲರ್ ಜಾಮೀನು ನೀಡಿದೆ.
ನಟ ದರ್ಶನ್‌ಗೆ ಈಗಾಗಲೇ ಅನಾರೋಗ್ಯದ ಕಾರಣ ಷರತ್ತು ಬದ್ಧ ಮಧ್ಯಂತರ ಜಾಮೀನು ಪ್ರಕಟಿಸಿದ್ದ ಹೈಕೋರ್ಟ್, ಇದೀಗ ಷರತ್ತು ಬದ್ಧ ರೆಗ್ಯುಲರ್ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾಗಿದ್ದ ಎ2 ಆರೋಪಿ ನಟ ದರ್ಶನ್, ಎ1 ಪವಿತ್ರಾ ಗೌಡ, ಎ6 ಜಗದೀಶ್, ಎ7 ಅನುಕುಮಾರ್, ಎ11 ನಾಗರಾಜ್, ಎ12 ಲಕ್ಷ್ಮಣ್ ಹಾಗೂ ಎ14 ಪ್ರದೋಷ್ ಅವರಿಗೆ ಇಂದು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇದೇ ಡಿಸೆಂಬರ್ 9 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ರೆಗ್ಯುಲರ್ ಜಾಮೀನು ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಇಂದು ಮಧ್ಯಾಹ್ನ ಸುಮಾರು 2.30 ಗಂಟೆಯ ವೇಳೆಗೆ ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಕೋರ್ಟ್ ವಿಧಿಸಿರುವ ಷರತ್ತುಗಳೇನು?
1.ನಟ ದರ್ಶನ್ ಹೈಕೋರ್ಟ್ ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
2. ಎಲ್ಲಾ ಆರೋಪಿಗಳು 1 ಲಕ್ಷ ಬಾಂಡ್ ನೀಡಿ, ಇಬ್ಬರು ಶ್ಯೂರಿಟಿ ದಾರರ ಸಹಿಯನ್ನು ಹಾಕಿಸಬೇಕು.
3. ಪ್ರತಿ ವಿಚಾರಣೆಗೂ ಕಡ್ಡಾಯವಾಗಿ ಹಾಜರಾಗಬೇಕು.
4.ಸಾಕ್ಷಿದಾರರಿಗೆ ಬೆದರಿಕೆ ಹಾಕುವಂತಿಲ್ಲ.
5.ಇದೇ ರೀತಿಯ ಕೇಸ್‌ನಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿದೆ.
ಜಾಮೀನು ದೊರೆಯದ ಇತರೆ ಆರೋಪಿಗಳು ಯಾರು?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಕೆ.ಪವನ್, ಎ4 ರಾಘವೇಂದ್ರ, ಎ8 ರವಿಶಂಕರ್, ಎ9 ಧನರಾಜ್, ಎ10 ವಿನಯ್ ಹಾಗೂ ಎ13 ದೀಪಕ್ ಎಂಬ ಆರೋಪಿಗಳಿಗೆ ಇನ್ನು ಹೈಕೋರ್ಟ್‌ನಿಂದ ಜಾಮೀನು ದೊರೆತಿಲ್ಲ.
ದರ್ಶನ್ ಗ್ಯಾಂಗ್ ಜಾಮೀನು ಸಿಕ್ಕಿರುವುದಕ್ಕೆ ಪೊಲೀಸರ ನಿಲುವೇನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ. ಹೀಗಾಗಿ ದರ್ಶನ್ ಗ್ಯಾಂಗ್‌ಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರಿಂಕೋರ್ಟ್‌ಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ದರ್ಶನ್ ಅವರ ಆರು ವಾರಗಳ ಕಾಲದ ಮಧ್ಯಂತರ ಜಾಮೀನನನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸುವ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ ಇದೀಗ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ರೆಗ್ಯುಲರ್ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್…
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…