ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ.

ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. ಆದರೆ ನಟ ದರ್ಶನ್‌ ಜೈಲಿನೊಳಗೆ ಓಡಾಡಬಹುದು ಎಂದು ಕೋರ್ಟ್‌ ಹೇಳಿದೆ.

ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಕೋರಿ ನಟ ದರ್ಶನ್‌ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನಿರಾಕರಣೆ ಮಾಡಿದೆ.

ಜೈಲು ಕೈಪಿಡಿಯಂತೆ ಜೈಲಿನೊಳಗೆ ವಾಕ್‌ ಮಾಡಬಹದು ಎಂದು ಹೇಳಿದ್ದು, ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡಲು ಅನುಮತಿ ನೀಡಿದೆ.

ಈ ಮೂಲಕ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದ್ದು, ದರ್ಶನ್‌ ಮಾನಸಿಕವಾಗಿ ತೀವ್ರ ಕುಗ್ಗಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

46 mins ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

5 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

5 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

5 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

6 hours ago