Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪಾರದರ್ಶಕ ವಿಚಾರಣೆಗೆ ನಟ ಉಪೇಂದ್ರ ಒತ್ತಾಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಗ್ಗೆ ತನಿಖೆ ನಡೆಯುತ್ತಿದೆ. ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ ಈವರೆಗೂ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಿರುವಾಗ ಅನೇಕ ಚಿತ್ರರಂಗದ ನಟ-ನಟಿಯರು ಈ ಬಗ್ಗೆ ಮಾತನಾಡಿಲ್ಲ. ಆದರೆ ನಿನ್ನೆ ತಾನೆ ನಟ ಸುದೀಪ್‌ ಈ ಬಗ್ಗೆ ಮಾತನಾಡಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದರು. ಇವಾಗ ನಟ ಉಪೇಂದ್ರ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವುದರ ಮೂಲಕ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಉಪೇಂದ್ರ ಪೋಸ್ಟ್‌ ಹೀಗಿದೆ…

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ….. ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು #Criminal JusticeReforms) ಎಂದು ಹೇಳಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷ್ಯ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ.

ಈ ರೀತಿ ಮಾಡಿದಾಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Tags: