ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.
ಪ್ರಕರಣದ 14ನೇ ಆರೋಪಿ ಪ್ರದೋಶ್ ಅಪ್ರೂವರ್ (ಮಾಫಿ ಸಾಕ್ಷಿ) ಆಗಿ ನೀಡಿರುವ ಮಹತ್ವದ ಹೇಳಿಕೆಯನ್ನು ತಡೆಯಲು ದರ್ಶನ್ ಕಡೆಯಿಂದ ನಡೆದ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಈ ಹಿಂದೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲ ನೇತೃತ್ವದ ದ್ವಿ-ಸದಸ್ಯ ಪೀಠವು, ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯದ ನಿಲುವನ್ನು ಎತ್ತಿಹಿಡಿದು, “ಮೇಲ್ನೋಟಕ್ಕೆ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿತು.
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…