ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿದ್ದ ಫೋಟೋವೊಂದು ವೈರಲ್ ಆಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿತ್ತು. ಇನ್ನುಳಿದ ಆರೋಪಿಗಳನ್ನು ಬೇರೆ ಬೇರೆ ಜಿಲ್ಲೆಗೆ ಶಿಫ್ಟ್ ಮಾಡಲಾಗಿತ್ತು.
ಇದೀಗ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರು ಫುಲ್ ಸೈಲೆಂಟ್ ಆಗಿದ್ದಾರೆ ಎನ್ನಲಾಗಿದ್ದು, ವಿಶೇಷ ಸೆಲ್‌ನಲ್ಲಿ ಬೆನ್ನುನೋವಿನಿಂದ ನರಳಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಮೂರು ದಿನಗಳ ಬಳಿಕ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಈ ವೇಳೆ ಪತ್ನಿ ಹಾಗೂ ಪುತ್ರನನ್ನು ಕಂಡ ನಟ ದರ್ಶನ್ ಭಾವುಕರಾಗಿದ್ದಾರೆ ಎನ್ನಲಾಗಿದೆ.