ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ದಾಸನಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವಾರಗಳಿಂದ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಮತ್ತೊಂದೆಡೆ ರೆಗ್ಯುಲರ್ ಬೇಲ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯೂ ಸಹ ಕೋರ್ಟ್‌ನಲ್ಲಿ ನಡೆಯುತ್ತಿದೆ.
ನಾಳೆ ವಿಚಾರಣೆ ನಡೆಯಲಿದ್ದು, ಈ ನಡುವೆ ದರ್ಶನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ದರ್ಶನ್‌ಗೆ ಚಿಕಿತ್ಸೆಗೆಂದು ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಈಗ ಚಿಕಿತ್ಸೆಗಾಗಿಯೇ ದರ್ಶನ್ ಬಳ್ಳಾರಿಯಿಂದ ಬೆಂಗಳೂರಿಗೆ ಬಂದು 32 ದಿನಗಳು ಮುಗಿದು ಹೋಗಿವೆ. ಇನ್ನು ಕೇವಲ 9 ದಿನಗಳು ಕಳೆದರೆ ಮತ್ತೆ ದರ್ಶನ್ ಜೈಲಿಗೆ ವಾಪಸ್ಸಾಗಬೇಕು. ಅಷ್ಟರಲ್ಲಿ ದರ್ಶನ್‌ಗೆ ರೆಗ್ಯುಲರ್ ಬೇಲ್ ಸಿಕ್ಕರೆ ಸೇಫ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಸದ್ಯಕ್ಕೆ ನಟ ದರ್ಶನ್‌ಗೆ ಸಂಪೂರ್ಣ ಶಸ್ತ್ರಚಿಕಿತ್ಸೆ ಆಗಿಲ್ಲ. ಕಾರಣ ಅವರು ರಕ್ತದೊತ್ತಡದಿಂದ ಬಳಲುತ್ತಿದ್ದು, ಬಿಪಿ ಇನ್ನೂ ಕಂಟ್ರೋಲ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಈಗ ಬಿಪಿ ನಾರ್ಮಲ್ ಇದ್ದು, ಈಗ ಸರ್ಜರಿ ಮಾಡಿಸಿಕೊಳ್ಳಲು ನಟ ದರ್ಶನ್ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…