ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ಗೆ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ದಾಸನಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವಾರಗಳಿಂದ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

ಮತ್ತೊಂದೆಡೆ ರೆಗ್ಯುಲರ್‌ ಬೇಲ್‌ಗೆ ನಟ ದರ್ಶನ್‌ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯೂ ಸಹ ಕೋರ್ಟ್‌ನಲ್ಲಿ ನಡೆಯುತ್ತಿದೆ.

ನಾಳೆ ವಿಚಾರಣೆ ನಡೆಯಲಿದ್ದು, ಈ ನಡುವೆ ದರ್ಶನ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ದರ್ಶನ್‌ಗೆ ಚಿಕಿತ್ಸೆಗೆಂದು ಹೈಕೋರ್ಟ್‌ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಈಗ ಚಿಕಿತ್ಸೆಗಾಗಿಯೇ ದರ್ಶನ್‌ ಬಳ್ಳಾರಿಯಿಂದ ಬೆಂಗಳೂರಿಗೆ ಬಂದು 32 ದಿನಗಳು ಮುಗಿದು ಹೋಗಿವೆ. ಇನ್ನು ಕೇವಲ 9 ದಿನಗಳು ಕಳೆದರೆ ಮತ್ತೆ ದರ್ಶನ್‌ ಜೈಲಿಗೆ ವಾಪಸ್ಸಾಗಬೇಕು. ಅಷ್ಟರಲ್ಲಿ ದರ್ಶನ್‌ಗೆ ರೆಗ್ಯುಲರ್‌ ಬೇಲ್‌ ಸಿಕ್ಕರೆ ಸೇಫ್‌ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಸದ್ಯಕ್ಕೆ ನಟ ದರ್ಶನ್‌ಗೆ ಸಂಪೂರ್ಣ ಶಸ್ತ್ರಚಿಕಿತ್ಸೆ ಆಗಿಲ್ಲ. ಕಾರಣ ಅವರು ರಕ್ತದೊತ್ತಡದಿಂದ ಬಳಲುತ್ತಿದ್ದು, ಬಿಪಿ ಇನ್ನೂ ಕಂಟ್ರೋಲ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಈಗ ಬಿಪಿ ನಾರ್ಮಲ್‌ ಇದ್ದು, ಈಗ ಸರ್ಜರಿ ಮಾಡಿಸಿಕೊಳ್ಳಲು ನಟ ದರ್ಶನ್‌ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

58 seconds ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

14 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

35 mins ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

21 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

21 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

22 hours ago