ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅಂಡ್ ಗ್ಯಾಂಗ್‌ನ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿಕೆ ಮಾಡಿದೆ.
ಇಂದು ಎ1 ಆರೋಪಿ ಪವಿತ್ರಾ ಗೌಡ ಹಾಗೂ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು.
ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಧನರಾಜ್, ಕಾರ್ತಿಕ್ ನ್ಯಾಯಾಲಯಕ್ಕೆ ಹಾಜರಾಗದೇ ಗೈರಾಗಿದ್ದ ಪರಿಣಾಮ ಅರ್ಜಿ ವಿಚಾರಣೆಯನ್ನು 64ನೇ ಎಸಿಎಂಎಂ ನ್ಯಾಯಾಲಯ ಮುಂದೂಡಿಕೆ ಮಾಡಿದೆ.
ಆಗಸ್ಟ್.12ರಂದು ಅರ್ಜಿ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಕೋರ್ಟ್‌ಗೆ ಎಲ್ಲಾ ಆರೋಪಿಗಳು ಹಾಜರಾಗಲೇಬೇಕು ಎಂದು ಖಡಕ್ ಸೂಚನೆ ನೀಡಿದೆ.





