ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಗ್ಯಾಂಗ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಡಿಸೆಂಬರ್ 9 ರಂದು ಮಧ್ಯಾಹ್ನ 2.30 ಗಂಟೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘವಾಗಿ ವಾದವನ್ನು ಆಲಿಸಿದ್ದರು. ಬಳಿಕ ಕರ್ನಾಟಕ ಪೊಲೀಸರ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್ ವಾದ ಆಲಿಸುತ್ತಿದ್ದ ವೇಳೆ ಕೋರ್ಟ್‌ನ ಸಮಯ ಮೀರಿದ ಕಾರಣ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರಿಗೆ ವಾದ ಮಂಡಿಸಲು ಕಾಲಾವಕಾಶವನ್ನು ನೀಡಿ ಸೋಮವಾರ(ಡಿ.9) ವಿಚಾರಣೆಯನ್ನು ನಡೆಸಲಾಗುವುದು ಎಂದು ಆದೇಶಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದ ದರ್ಶನ್ ಅನಾರೋಗ್ಯದ ಕಾರಣ ಆರು ವಾರಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣವಾಗಿ ರೆಗ್ಯುಲರ್ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ನಿರಂತರವಾಗಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಲೇ ಇದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…