ರಾಜ್ಯ

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಪಶ್ಚಾತ್ತಾಪದ ಮಾತು

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ಹೊರಗೆ ಬಂದ ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಈಗ ಹತ್ಯೆ ಬಗ್ಗೆ ಪಶ್ಚಾತ್ತಾಪ ಕಾಡುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಜೈಲು ಸಿಬ್ಬಂದಿಯೊಬ್ಬರ ಬಳಿ ಮಾತನಾಡಿರುವ ದರ್ಶನ್‌, ಇಲ್ಲಿಂದ ಹೊರಗಡೆ ಹೋದ ಮೇಲೆ ಮೊದಲು ರೇಣುಕಾಸ್ವಾಮಿ ಕುಟುಂಬವನ್ನು ಭೇಟಿ ಮಾಡುತ್ತೇನೆ. ಅವರಿಗೆ ಸಹಾಯ ಕೂಡ ಮಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನದು ಸಾಯಿಸುವ ಮನಸ್ಸಲ್ಲ. ನಾನಂತೂ ರೇಣುಕಾಸ್ವಾಮಿಯನ್ನು ಕೊಲೆ ಮಾಡಿಲ್ಲ ಎಂದು ಹೇಳಿರುವ ಅವರು, ಪತ್ನಿ ವಿಜಯಲಕ್ಷ್ಮೀ ಜೊತೆಗೂ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಇನ್ನು ದರ್ಶನ್‌ ಅವರು, ಬಳ್ಳಾರಿ ಜೈಲಿನಲ್ಲಿ ಕಳೆದ ಮೂರು ದಿನಗಳಿಂದ ತುಂಬಾ ಸಂತೋಷದಲ್ಲಿದ್ದಾರೆ ಎನ್ನಲಾಗಿದ್ದು, ಎಲ್ಲರ ಜೊತೆಗೆ ತುಂಬಾ ಆತ್ಮೀಯತೆ ಬೆಳೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಜೈಲಿನಲ್ಲಿ ತಲೆದಿಂಬು, ಬೆಡ್‌ ಹಾಗೂ ಚೇರ್‌ಗೆ ದರ್ಶನ್‌ ಬೇಡಿಕೆ ಇಟ್ಟಿದ್ದು, ಅಧಿಕಾರಿಗಳು ಇದನ್ನು ಕೊಡಲು ನಿರಾಕರಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

9 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

9 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

10 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

11 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

11 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

12 hours ago