Mysore
22
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ದರ್ಶನ್‌ ಮತ್ತು ಗ್ಯಾಂಗ್‌ಗೆ ಇನ್ನೂ 3 ದಿನ ಜೈಲೇ ಫಿಕ್ಸ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌ ಅಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು.

ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ ವಿಡಿಯೋ ಕಾನ್ಫರೆನ್ಸ್‌ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್.‌12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಎಸಿಪಿ ಚಂದನ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ನಟ ದರ್ಶನ್‌ಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಫಿಟ್ನೆಸ್‌ ಮೇಂಟೇನ್‌ ಮಾಡಲು ಒದ್ದಾಟ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಜೈಲಿನಲ್ಲಿ ಅನ್ನ ಬಿಟ್ಟು ಚಪಾತಿ, ಮುದ್ದೆ ಊಟಕ್ಕೆ ಮೊರೆ ಹೋಗಿರುವ ಜೊತೆಗೆ ವಿಟಮಿನ್‌ ಟ್ಯಾಬ್ಲೆಟ್‌ಗಳನ್ನು ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags:
error: Content is protected !!