ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಟ ದರ್ಶನ್‌ಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಟ್ನೆಸ್ ಮೇಂಟೇನ್ ಮಾಡಲು ಒದ್ದಾಟ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಜೈಲಿನಲ್ಲಿ ಅನ್ನ ಬಿಟ್ಟು ಚಪಾತಿ, ಮುದ್ದೆ ಊಟಕ್ಕೆ ಮೊರೆ ಹೋಗಿರುವ ಜೊತೆಗೆ ವಿಟಮಿನ್ ಟ್ಯಾಬ್ಲೆಟ್‌ಗಳನ್ನು ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…