Mysore
21
broken clouds

Social Media

ಶುಕ್ರವಾರ, 01 ನವೆಂಬರ್ 2024
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್‌ ನ್ಯಾಯಾಲಯ ದರ್ಶನ್‌ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ದರ್ಶನ್‌ ಸೇರಿದಂತೆ ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವಿಚಾರಣೆಯಲ್ಲಿ 57ನೇ ಸಿಸಿಎಚ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು(ಅ.15) ನಟ ದರ್ಶನ್‌ ಅವರ ಪರ ವಕೀಲ ಸುನೀಲ್‌ ಕುಮಾರ್‌ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸುಮಾರು 300 ಪುಟಗಳಿಗೂ ಅಧಿಕ ದಸ್ತವೇಜು ಹೊಂದಿರುವ ಈ ಅರ್ಜಿಗೆ ಸದ್ಯ ಎಫ್‌ಆರ್‌ ನಂಬರ್‌ ನೀಡಲಾಗಿದ್ದು, ಪರಿಶೀಲನೆ ನಂತರ ಕ್ರಿಮಿಲ್‌ ಅರ್ಜಿ ಸಂಖ್ಯೆ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ.

Tags: