ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್ ನ್ಯಾಯಾಲಯ ದರ್ಶನ್ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವಿಚಾರಣೆಯಲ್ಲಿ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು(ಅ.15) ನಟ ದರ್ಶನ್ ಅವರ ಪರ ವಕೀಲ ಸುನೀಲ್ ಕುಮಾರ್ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸುಮಾರು 300 ಪುಟಗಳಿಗೂ ಅಧಿಕ ದಸ್ತವೇಜು ಹೊಂದಿರುವ ಈ ಅರ್ಜಿಗೆ ಸದ್ಯ ಎಫ್‌ಆರ್ ನಂಬರ್ ನೀಡಲಾಗಿದ್ದು, ಪರಿಶೀಲನೆ ನಂತರ ಕ್ರಿಮಿಲ್ ಅರ್ಜಿ ಸಂಖ್ಯೆ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ.
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…