ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌-ಮೈಸೂರು, ಪವಿತ್ರಾ ಗೌಡ-ದೆಹಲಿಗೆ ತೆರಳಲು ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್‌ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.10) 57ನೇ ಸಿಸಿಚ್‌ ನ್ಯಾಯಾಲಯಕ್ಕೆ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನುಳಿದ ಡಿ ಗ್ಯಾಂಗ್‌ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ದರ್ಶನ್‌ ಮೈಸೂರಿಗೆ ತೆರಳಲು ಹಾಗೂ ಪವಿತ್ರಾ ಗೌಡ ಹೊರ ರಾಜ್ಯದ ದೇವಾಲಯ ಮತ್ತು ‌ಆರ್‌.ಆರ್.ನಗರದಲ್ಲಿರುವ ತಮ್ಮ ರೆಡ್‌ ಕಾರ್ಪೆಟ್‌ ಶೋ ರೂಂಗೆ ವ್ಯವಹಾರದ ಸಂಬಂಧ ದೆಹಲಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಸಿಎಚ್‌ನ ನ್ಯಾಯಪೀಠವೂ ಆರೋಪಿ ದರ್ಶನ್‌ಗೆ ಜನವರಿ.12 ರಿಂದ 17ರವರೆಗೆ ಮೈಸೂರಿನಲ್ಲಿ ವಾಸ್ತವ್ಯದಲ್ಲಿರಲು ಅನುಮತಿ ನೀಡಿದೆ. ಅಲ್ಲದೇ ಪವಿತ್ರಾ ಗೌಡ ಅವರಿಗೆ ಒಂದು ತಿಂಗಳ ಕಾಲ ದೆಹಲಿ ಮತ್ತು ಮುಂಬೈ ಸೇರಿದಂತೆ ಹೊರ ರಾಜ್ಯದ ದೇವಾಲಯಗಳಿಗೆ ತೆರಳಲು ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಅರ್ಚನ ಎಸ್‌ ಎಸ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago