ಬೆಂಗಳೂರು: ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿರುವ ರೇಣುಕಾಸ್ವಾಮಿ ಕುಟುಂಬಸ್ಥರಿಗಾಗಿ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಎ1, ಎ2 ಆರೋಪಿಗಳನ್ನಾಗಿ ಮಾಡಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದರು.
ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿದ್ದಾರೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಅವರಿಗೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಇದೇ ವೇಳೆ ಗೃಹ ಸಚಿವರ ಮನೆ ಬಳಿ ಮನವಿ ನೀಡಲು ಬಂದಿದ್ದವರನ್ನು ಪೊಲೀಸರು ಕರೆದೊಯ್ದರು. ಈ ವೇಳೆ ತರಾಟೆಗೆ ತೆಗೆದುಕೊಂಡ ಪರಮೇಶ್ವರ್ ಅವರು, ಜನರು ಅಹವಾಲು ನೀಡಲು ಬಂದಾಗ ಸುಮ್ಮನೆ ನಿಂತುಕೊಂಡು ನೋಡಬೇಕು. ಇನ್ನೊಮ್ಮೆ ಈ ರೀತಿ ನಡೆದುಕೊಳ್ಳದಂತೆ ಸೂಚಿಸಿದರು.
ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಇಲ್ಲಿಗೆ ಬರುತ್ತಾರೆ. ಅವರು ನಮ್ಮ ಬಳಿ ಬಾರದೇ ಇನ್ಯಾರ ಬಳಿ ಹೋಗಲು ಸಾಧ್ಯ ಎಂದರು.